ನನ್ನ ದೇಹದ ಬೂದಿ ಗಾಳಿಯಲಿ ತೂರಿಬಿಡಿ

ನನ್ನ ದೇಹದ ಬೂದಿ ಗಾಳಿಯಲಿ ತೂರಿಬಿಡಿ ಹೋಗಿ ಬೀಳಲಿ ಬತ್ತ ಬೆಳೆಯುವಲ್ಲಿ ಬೂದಿ ಗೊಬ್ಬರದಿಂದ ತೆನೆಯೊಂದು ನೆಗೆದುಬರೆ ಧನ್ಯವಾಯಿತು ಹುಟ್ಟು ಸಾವಿನಲ್ಲಿ                 || ಪ || ನನ್ನ ದೇಹದ ಬೂದಿ ಹೊಳೆಯಲ್ಲಿ ಹರಿಯಬಿಡಿ ತೇಲಿ ಬೀಳಲಿ ಮೀನ ಬಾಯಿಯಲ್ಲಿ ಮುಷ್ಠಿ ಬೂದಿಯ ತಿಂದು ಪುಷ್ಪವಾಗಲು ಮೀನು ಧನ್ಯವಾಯಿತು ಹುಟ್ಟು ಸಾವಿನಲ್ಲಿ                 || 1 || ನನ್ನ ದೇಹದ ಬೂದಿ ಕೊಳದಲ್ಲಿ ಬೀರಿಬಿಡಿ ತಾವರೆಯು ದಿನದಿನವು ಅರಳುವಲ್ಲಿ ಬೂದಿ ಕೆಸರನು ಕೂಡಿ ಹೊಸ ಪಂಕಜವು ಮೂಡೆ ಧನ್ಯವಾಯಿತು ಹುಟ್ಟು […]

Read More