ಅ ಆ ಇ ಈ, ಅ ಆ ಇ ಈ ಕನ್ನಡದಾ ಅಕ್ಷರಮಾಲೆ ಅಮ್ಮಾ ಎಂಬುದೇ ಕಂದನ ಕರುಳಿನ ಕರೆಯೋಲೆ || ಪ || ಆಟ ಊಟ ಓಟ ಕನ್ನಡ ಒಂದನೇ ಪಾಠ ಕನ್ನಡ ಭಾಷೆಯ ಕಲಿತವನಿಗೆ ಜೀವನವೇ ರಸದೂಟ || 1 || ಇ ಈ ಇದ್ದವರೆಲ್ಲ ಇಲ್ಲದವರಿಗೆ ನೀಡಲೇಬೇಕು ಈಶ್ವರನಲ್ಲಿ ಎಂದೂ ನಂಬಿಕೆ ಇಡಬೇಕು || 2 || ಉ, ಊ ಉಪ್ಪು ತಿಂದ ಮನೆಗೆ ಎರಡು ಬಗೆಯಬೇಡ ಊರಿಗೆ ದ್ರೋಹ ಮಾಡಿ ಬದುಕಲೆಣಿಸಬೇಡ […]