ಭೋಗ ಮೆಟ್ಟಿ ತ್ಯಾಗ ಮೆರೆದ ಕರ್ಮಭೂಮಿ ಭಾರತ ಮನುಜರಾಗಿ ಹುಟ್ಟಲಿಲ್ಲಿ ಜನುಮಜನುಮ ಸುಕೃತ || ಪ || ನಾಲ್ಕುದಿನದ ಬಾಳು ನಮದು ಆಗಲಿಂದು ಸಾರ್ಥಕ ತ್ಯಾಗ ಮೆರೆದು ಅಮರರಾದ ಸಂತರೆಮೆಗೆ ಪ್ರೇರಕ ಮಣ್ಣ ಋಣವ ಕಳೆವುದಕ್ಕೆ ಸೇವೆಯೊಂದೇ ಸಾಧಕ ನಗುತ ನಲಿವ ರಾಷ್ಟ್ರಕ್ಕಾಗಿ ಸಾಗಬೇಕು ಕಾಯಕ || 1 || ಧ್ಯೇಯ ಪಥವ ಬಿಟ್ಟ ಬಾಳ್ವೆ ಬೇಡ ನಮಗೆ ನೀರಸ ಪರರಿಗಾಗಿ ಸತತ ಮಿಡಿವ ಹೃದಯದಿಂದ ಸಂತಸ ಕಳೆದು ಬಿಡುವ ರೋಷ ದ್ವೇಷ ಎಲ್ಲ ಮನದ ಕಲ್ಮಶ […]