ಆಕಾಶಕೆದ್ದುನಿಂತ ಪರ್ವತ ಹಿಮ ಮೌನದಲ್ಲಿ

ಆಕಾಶಕೆದ್ದುನಿಂತ ಪರ್ವತ ಹಿಮ ಮೌನದಲ್ಲಿ ಕರಾವಳಿಗೆ ಮುತ್ತನಿಡುವ ಪೆರ್ದೆರೆಗಳ ಗಾನದಲ್ಲಿ ಬಯಲ ತುಂಬ ಹಸಿರ ದೀಪ ಹಚ್ಚಿ ಹರಿವ ನದಿಗಳಲ್ಲಿ ನೀಲಿಯಲ್ಲಿ ಹೊಗೆಯ ಚೆಲ್ಲಿ ಯಂತ್ರ ಘೋಷವೇಳುವಲ್ಲಿ ಕಣ್ಣು ಬೇರೆ, ನೋಟ ಒಂದು ನಾವು ಭಾರತೀಯರು || ಪ || ನಾಡಿನೆಲ್ಲ ಗಡಿಗಳಲ್ಲಿ ಬಾನಿನಲ್ಲಿ ಕಡಲಿನಲ್ಲಿ ನಮ್ಮ ಯೋಧರೆತ್ತಿಹಿಡಿದ ನಮ್ಮ ಧ್ವಜದ ನೆರಳಿನಲ್ಲಿ ಒಂದೆ ನೆಲದ ತೊಟ್ಟಿಲಲ್ಲಿ ಬೆಳೆದ ನಮ್ಮ ಕೊರಳಿನಲ್ಲಿ ನಮ್ಮ ಯುಗದ ದನಿಗಳಾಗಿ ಮೂಡಿದೆಲ್ಲ ಹಾಡಿನಲ್ಲಿ ಭಾಷೆ ಬೇರೆ ಭಾವವೊಂದು ನಾವು ಭಾರತೀಯ || […]

Read More