ಏಳು, ಮೇಲೇಳು ಸಾಧುವೆ (ಚಾಗಿಯ ಹಾಡು)

ಏಳು, ಮೇಲೇಳೇಳು ಸಾಧುವೆ, ಹಾಡು ಚಾಗಿಯ ಹಾಡನು; ಹಾಡಿನಿಂದೆಚ್ಚರಿಸು ಮಲಗಿಹ ನಮ್ಮ ಈ ತಾಯ್ನಾಡನು ! ದೂರದಡವಿಯೊಳೆಲ್ಲಿ ಲೌಕಿಕ ವಿಷಯವಾಸನೆ ಮುಟ್ಟದೊ, ಎಲ್ಲಿ ಗಿರಿಗುಹೆ ಕಂದರದ ಬಳಿ ಜಗದ ಗಲಿಬಿಲಿ ತಟ್ಟದೊ, ಎಲ್ಲಿ ಕಾಮವು ಸುಳಿಯದೋ, – ಮೇಣ್ ಎಲ್ಲಿ ಜೀವವು ತಿಳಿಯದೋ ಕೀರ್ತಿ ಕಾಂಚನವೆಂಬುವಾಸೆಗಳಿಂದ ಜನಿಸುವ ಭ್ರಾಂತಿಯ, ಎಲ್ಲಿ ಆತ್ಮವು ಪಡೆದು ನಲಿವುದೊ ನಿಚ್ಚವಾಗಿಹ ಶಾಂತಿಯ, ನನ್ನಿಯರಿವಾನಂದವಾಹಿನಿಯೆಲ್ಲಿ ಸಂತತ ಹರಿವುದೋ, ಎಲ್ಲಿ ಎಡೆಬಿಡದಿರದ ತೃಪ್ತಿಯ ಝರಿ ನಿರಂತರ ಸುರಿವುದೋ, ಅಲ್ಲಿ ಮೂಡಿದ ಹಾಡನುಲಿಯೈ, ವೀರ ಸಂನ್ಯಾಸಿ […]

Read More