ಶ್ರೀ ವಿವೇಕಾನಂದ ಗುರುವರ (ಕುವೆಂಪು)

ಶ್ರೀ ವಿವೇಕಾನಂದ ಗುರುವರ, ನವಯುಗಾಚಾರ್ಯ, ರಾಮಕೃಷ್ಣರ ಭೀಮಶಿಷ್ಯನೆ, ವೀರ ವೇದಾಂತಿ, ಭಾರತಾಂಬೆಯ ಧೀರಪುತ್ರನೆ, ಸಾಧು ಭೈರವನೆ, ಸ್ಥೈರ್ಯದಚಲವೆ, ಧೈರ್ಯದಂಬುಧಿ, ಜಯತು! ಜಯ ಜಯತು! || ಪ || ಮೊರೆದು ಗರ್ಜಿಪ ಕಡಲ ವಾಣಿಯು ನಿನ್ನ ವರವಾಣಿ, ಕಾರಮಿಂಚನು ನಗುವ ತೇಜವು ನಿನ್ನ ಮೈ ಕಾಂತಿ, ಆಳವಂಬುಧಿಯಾಳ ಮೇರೆಯೆ ನಭದ ವಿಸ್ತಾರ ಮಂದರಾದ್ರಿಯ ಮೀರಿದಚಲನು ನೀನು, ಯೋಗೀಂದ್ರ ! || 1 || ನಿನ್ನ ಹೆಸರದೆ ಶಕ್ತಿಯೀಯುವ ದಿವ್ಯತರ ಮಂತ್ರ ನಿನ್ನ ಮಾರ್ಗವೆ ಮುಕ್ತಿದಾಯಕವಾದ ವರಮಾರ್ಗ ನಮ್ಮ ಹೃದಯಕೆ […]

Read More